ಹತ್ತಾರು ವರ್ಷಗಳಿಂದ ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದು, ಬೇರೆಡೆಗೆ ವರ್ಗಾವಣೆಯಾಗುವ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಬಿಗ್ ಶಾಕ್ ನೀಡಿದೆ.
2023-24ನೇ ಸಾಲಿಗೆ ಕಡ್ಡಾಯ ವರ್ಗಾವಣೆ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಹತ್ತಾರು ವರ್ಷಗಳಿಂದ ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದು ಬೇರೆಡೆಗೆ ವರ್ಗಾವಣೆಯಾಗುವ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಬಿಗ್ ಶಾಕ್ ನೀಡಿದೆ. ಈ ವರ್ಷ 25,000 ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯ ಸರ್ಕಾರದ ವರ್ಗಾವಣೆ ನಿಯಮಾವಳಿಯಂತೆ ಪ್ರತಿ ವರ್ಷ ಶಿಕ್ಷಕರ ವರ್ಗಾವಣೆ ನಡೆಯಬೇಕು. ಆದರೆ, ಕಾರಣಾಂತರಗಳಿಂದ ಕೆಲವು ವರ್ಷಗಳಿಂದ ಎರಡು ವರ್ಷಕ್ಕೊಮ್ಮೆ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುತ್ತಿದೆ.
ಈ ವರ್ಷ ಶಿಕ್ಷಕರ ವರ್ಗಾವಣೆಗೆ ಯಾವುದೇ ತೊಂದರೆ ಇಲ್ಲ. 2022-23ನೇ ಸಾಲಿನ ಶಿಕ್ಷಕರ ವರ್ಗಾವಣೆ ನಾಲ್ಕು ತಿಂಗಳ ಹಿಂದೆಯಷ್ಟೇ ಪೂರ್ಣಗೊಂಡಿದೆ. ಇದಾದ ಬಳಿಕ 13,351 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಈ ನೇಮಕಾತಿ ಪ್ರಕ್ರಿಯೆ ಅಂತ್ಯಕ್ಕೆ ವರ್ಗಾವಣೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಗಿಯುವ ಹೊತ್ತಿಗೆ ಪರೀಕ್ಷೆಯ ಹಂತ ಬಂದು ನಿಲ್ಲುತ್ತದೆ. ಈ ವೇಳೆ ವರ್ಗಾವಣೆ ಮಾಡುವುದು ಸರಿಯಲ್ಲ ಎಂಬ ನಿರ್ಧಾರಕ್ಕೆ ಬಂದಿರುವ ರಾಜ್ಯ ಸರ್ಕಾರ ಈ ವರ್ಷ ಶಿಕ್ಷಕರ ವರ್ಗಾವಣೆಗೆ ಬ್ರೇಕ್ ಹಾಕುವ ಸಾಧ್ಯತೆ ಇದೆ.
ಕರ್ನಾಟಕ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ
ಕರ್ನಾಟಕ ಎಸ್ಎಸ್ಎಲ್ಸಿ ಮತ್ತು 2ನೇ ಪಿಯುಸಿ ಅಂತಿಮ ಪರೀಕ್ಷೆ 2023-24: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ) ಮತ್ತು ಸೆಕೆಂಡರಿ ಪಿಯುಸಿ ಪರೀಕ್ಷೆ (2ನೇ ಪಿಯುಸಿ ಪರೀಕ್ಷೆ) ವ್ಯವಸ್ಥೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ SSLC, 2nd PUC ಅಂತಿಮ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಇದನ್ನೂ ಸಹ ಓದಿ: ಜನಸಾಮಾನ್ಯರಿಗೆ ಗುಡ್ ನ್ಯೂಸ್: ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಒದಗಿಸಲು ಸಜ್ಜಾದ ಕೇಂದ್ರ!
ಪ್ರಸ್ತುತ ಪರೀಕ್ಷಾ ಪದ್ಧತಿಯಲ್ಲಿ ವಿದ್ಯಾರ್ಥಿಗಳಿಗೆ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆಯಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮಂಡಳಿ ಅಧಿಸೂಚನೆಯನ್ನು ಹೊರಡಿಸಿದೆ. ಶಿಕ್ಷಣ ಮಂಡಳಿಯು ಬಿಡುಗಡೆ ಮಾಡಿದ ವೇಳಾಪಟ್ಟಿಯಲ್ಲಿ ಮೊದಲನೆಯದು ಮಾರ್ಚ್ 30 2024 ರಿಂದ ಏಪ್ರಿಲ್ 15 2024 ರಂದು ಕೊನೆಗೊಳ್ಳುತ್ತದೆ. ಎರಡನೇ ಪರೀಕ್ಷೆಯು ಜೂನ್ 12 ರಿಂದ ಜೂನ್ 19 ರವರೆಗೆ ಪ್ರಾರಂಭವಾಗಿದೆ. ಪರೀಕ್ಷೆಯು ಜೂನ್ 29 ರಿಂದ ಪ್ರಾರಂಭವಾಗಿ ಆಗಸ್ಟ್ 5 ರಂದು ಕೊನೆಗೊಳ್ಳುತ್ತದೆ.
ಕರ್ನಾಟಕ SSLC 2nd PUC ಅಂತಿಮ ಪರೀಕ್ಷೆಯ ಸಂಭವನೀಯ ವೇಳಾಪಟ್ಟಿ:
SSLC ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ:
ಪರೀಕ್ಷೆ -1 – ಮಾರ್ಚ್ 30 ರಿಂದ ಏಪ್ರಿಲ್ 15 (ಮೇ 8 ರಂದು ಫಲಿತಾಂಶ, ಮೇ 23 ರಂದು ಮೌಲ್ಯಮಾಪನ ಫಲಿತಾಂಶ)
ಪರೀಕ್ಷೆ-2 – ಜೂನ್ 12 ರಿಂದ ಜೂನ್ 19 (ಜೂನ್ 29 ರಂದು ಫಲಿತಾಂಶ ಪ್ರಕಟ, ಜುಲೈ 10 ರಂದು ಮರುಮೌಲ್ಯಮಾಪನ ಫಲಿತಾಂಶ ಪ್ರಕಟ)
ಪರೀಕ್ಷೆ 3 – ಜೂನ್ 29 ರಿಂದ ಆಗಸ್ಟ್ 5 (ಆಗಸ್ಟ್ 19 ಫಲಿತಾಂಶ ಘೋಷಣೆ, ಆಗಸ್ಟ್ 26 ಮರುಮೌಲ್ಯಮಾಪನ ಫಲಿತಾಂಶ ಘೋಷಣೆ)
2ನೇ ಪಿಯುಸಿ ಪರೀಕ್ಷಾ ವೇಳಾಪಟ್ಟಿ:
ಪರೀಕ್ಷೆ 1 – ಮಾರ್ಚ್ 1 ರಿಂದ ಮಾರ್ಚ್ 25 (ಏಪ್ರಿಲ್ 22 ಫಲಿತಾಂಶ ಪ್ರಕಟ, ಮೇ 10 ಮರುಮೌಲ್ಯಮಾಪನ ಫಲಿತಾಂಶ)
ಪರೀಕ್ಷೆ-2: ಮೇ 15 ರಿಂದ ಜೂನ್ 25 (ಜೂನ್ 21 ಫಲಿತಾಂಶ ಪ್ರಕಟ, ಜೂನ್ 29 ಮರುಮೌಲ್ಯಮಾಪನ ಫಲಿತಾಂಶ)
ಪರೀಕ್ಷೆ-3: ಜುಲೈ 12 ರಿಂದ ಜುಲೈ 30 (ಆಗಸ್ಟ್ 16 ರಂದು ಫಲಿತಾಂಶ ಪ್ರಕಟ, ಮೇ 23 ರಂದು ಮರುಮೌಲ್ಯಮಾಪನ ಫಲಿತಾಂಶ ಪ್ರಕಟವಾಗಿದೆ.
ಇತರೆ ವಿಷಯಗಳು:
ಮಳೆಯ ಎಚ್ಚರಿಕೆ ನೀಡಿದ IMD: ಮುಂದಿನ 5 ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮುಂದುವರಿಯಲಿದೆ ಭಾರೀ ಮಳೆ
ಪಡಿತರ ಚೀಟಿ ಹೊಸ ನಿಯಮ: One Ration One Nation, ಕೂಡಲೆ ಈ ಕೆಲಸ ಮಾಡಿ ಇಲ್ಲದಿದ್ದರೆ ಉಚಿತ ರೇಷನ್ ಬಂದ್