rtgh

ಇಂದಿನಿಂದ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಅರ್ಜಿ ಸಲ್ಲಿಕೆಗೆ ಅವಕಾಶ!! ಯಾವೆಲ್ಲಾ ದಾಖಲೆಗಳು ಬೇಕು?

ಹಲೋ ಸ್ನೇಹಿತರೇ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಆಹಾರ ಧಾನ್ಯ ವಿತರಣೆ ಮಾಡಲು ಪಡಿತರ ಚೀಟಿಯನ್ನು ನೀಡಲಾಗುತ್ತದೆ. ಈಗಾಗಲೇ ರೇಷನ್ ಕಾರ್ಡ್ ಹೊಂದಿದ್ದು ಅದರಲ್ಲಿ ತಿದ್ದುಪಡಿ ಮಾಡಿಸಲು ಮತ್ತು ರೇಷನ್ ಕಾರ್ಡ್ ಹೊಂದಿಲ್ಲದವರು ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

New Ration Card Application

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಆಹಾರ ಧಾನ್ಯ ವಿತರಣೆ ಮಾಡಲು ಪಡಿತರ ಚೀಟಿಯನ್ನು ನೀಡಲಾಗುತ್ತದೆ. ಈಗಾಗಲೇ ರೇಷನ್ ಕಾರ್ಡ್ ಹೊಂದಿದ್ದು ಅದರಲ್ಲಿ ತಿದ್ದುಪಡಿ ಮಾಡಿಸಲು ಮತ್ತು ರೇಷನ್ ಕಾರ್ಡ್ ಹೊಂದಿಲ್ಲದವರು ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

ಈ ಹಿಂದೆ 2-3 ಬಾರಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿತ್ತು ಇನ್ನು ಮುಂದಿನ ದಿನಗಳಲ್ಲಿಯು ಈ ಸೇವೆ ಮುಂದುವರೆಯುತ್ತದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ ಏಕೆಂದರೆ ಬಹುತೇಕ ತಿದ್ದುಪಡಿಗೆ ಅವಕಾಶ ಕಲ್ಪಿಸಿದ ದಿನಗಳಲ್ಲಿ ಸರ್ವರ್ ಸಮಸ್ಯೆಯಿಂದ ಅನೇಕ ಜನರಿಗೆ ಇನ್ನು ಅರ್ಜಿ ಸಲ್ಲಿಸಲು ಸಾದ್ಯವಾಗಿರುವುದಿಲ್ಲ ಈ ಕಾರಣದಿಂದಾಗಿ.

ಪ್ರಸ್ತುತ ಜಿಲ್ಲೆಯಲ್ಲಿ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಮತ್ತು ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಹೆಸರು ಬದಲಾವಣೆ, ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಎರಡಕ್ಕೂ ಪ್ರತ್ಯೇಕ ದಿನಗಳನ್ನು ನಿಗದಿಪಡಿಸಲಾಗಿದೆ.


ಹೊಸ ಆದ್ಯತಾ ಪಡಿತರ ಚೀಟಿಗೆ ಈ ದಿನ ಅರ್ಜಿ ಸಲ್ಲಿಸಲು ಅವಕಾಶ:

ಹೊಸ ಆದ್ಯತಾ ಪಡಿತರ ಚೀಟಿಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು 03 ಡಿಸೆಂಬರ್ 2023 ರಂದು ಒಂದು ದಿನ ಮಾತ್ರ ಬೆಳಗ್ಗೆ 11-00 ಗಂಟೆಯಿಂದ ಮಧ್ಯಾಹ್ನ 2-00 ಗಂಟೆಯವರೆಗೆ ಗ್ರಾಮ ಒನ್‌, ಕರ್ನಾಟಕ ಒನ್ ಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. 

ಇದನ್ನೂ ಸಹ ಓದಿ : ಮತ್ತೊಂದು ಬ್ಯಾಂಕ್ ಲೈಸನ್ಸ್ ರದ್ದು ಮಾಡಿದ RBI.! ಈ ಬ್ಯಾಂಕ್‌ನಲ್ಲಿ ಖಾತೆ ಇರುವವರು ಕೂಡಲೇ ಚೆಕ್ ಮಾಡಿ

ಅರ್ಹ ಫಲಾನುಭವಿಗಳು ಈ ಸಮಯದಲ್ಲಿ ಅರ್ಜಿ ಸಲ್ಲಿಸಲು ಸೂಕ್ತ ದಾಖಲಾತಿಗಳಾದ ಆಧಾರ್‌ ಕಾರ್ಡ್‌ ಪ್ರತಿ ಮತ್ತು ವಿಳಾಸ ದೃಡೀಕರಣ ಪತ್ರ, ಜಾತಿ ಮತ್ತು ಆಧಾಯ ಪ್ರಮಾಣ ಪತ್ರ, ಕುಟುಂಬ ಸದಸ್ಯರ ಆಧಾರ್ ಕಾರ್ಡ್ ಪ್ರತಿ ಸಮೇತ ನಿಗದಿಪಡಿಸಿದ ಸಮಯದಲ್ಲಿ ಕೇಂದ್ರಗಳನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ರೇಷನ್ ಕಾರ್ಡ್ ತಿದ್ದುಪಡಿಗೆ ಈ ದಿನ ಅರ್ಜಿ ಸಲ್ಲಿಸಬೇಕು:

ರಾಜ್ಯ ಸರಕಾರದ ನೂತನ ಗ್ಯಾರಂಟಿ ಯೋಜನೆಯಡಿ ಸೌಲಭ್ಯ ಪಡೆಯಲು ರೇಷನ್ ಕಾರ್ಡ್‌ನಲ್ಲಿರುವ ಎಲ್ಲಾ ಮಾಹಿತಿಯು ಸರಿಯಾಗಿರುವುದು ಕಡ್ಡಾಯವಾಗಿರುವುದರಿಂದ ತಮ್ಮ ಪಡಿತರ ಚೀಟಿಯಲ್ಲಿ ಪ್ರಸ್ತುತ ದಾಖಲಾಗಿರುವ ಮಾಹಿತಿ ತಪ್ಪಾಗಿರುವವರು ಸರಿಪಡಿಸಿಕೊಳ್ಳಲು ಆಹಾರ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿದೆ.

ಇದರ ಜೊತೆಯಲ್ಲಿ ಪಡಿತರ ಚೀಟಿಯ ಮುಖ್ಯಸ್ಥರ ಹೆಸರು ಬದಲಾವಣೆಗೂ ಸಹ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು 29 ನವೆಂಬರ್‌  ಮತ್ತು 30 ರಂದು ಒಟ್ಟು ಎರಡು ದಿನಗಳ ಮಟ್ಟಿಗೆ ಅವಕಾಶವನ್ನು ಮಾಡಿಕೊಡಲಾಗಿದ್ದು ಈ ಸಮಯದಲ್ಲಿ ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಗಳನ್ನು ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಸ್ವೀಕೃತಿಯನ್ನು ಪಡೆದುಕೊಳ್ಳಬಹುದು.

ಎಲ್ಲಿ ಅರ್ಜಿ ಸಲ್ಲಿಸಬೇಕು?

ಗ್ರಾಮೀಣ ಪ್ರದೇಶದ ನಾಗರಿಕರು ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದದಲ್ಲಿ ಅರ್ಜಿ ಸಲ್ಲಿಸಬವುದು ಇತರೆ ಭಾಗದಲ್ಲಿರುವ ಜನರು ಕರ್ನಾಟಕ ಒನ್ ಕೇಂದ್ರ ಭೇಟಿ ಮಾಡಿ ಅರ್ಜಿ ಸಲ್ಲಿಸಬೇಕು.

ಇಲಾಖೆಯು ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ಈ ಮೇಲಿನ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದ್ದು ಇವುಗಳನ್ನು ಹೊರತುಪಡಿಸಿ ಬೇರೆ ಇನ್ಯಾವುದೇ ಆನ್‌ಲೈನ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಇತರೆ ಜಿಲ್ಲೆಯಲ್ಲಿ ಯಾವಾಗ ಅರ್ಜಿ ಸಲ್ಲಿಸಲು ಅವಕಾಶ?

ಸದ್ಯ ಕಲಬುರಗಿ ಜಿಲ್ಲೆಯಲ್ಲಿ ಹೊಸ ಅದ್ಯತಾ ಪಡಿತರ ಚೀಟಿ ಮತ್ತು ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಇತರೆ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಅವಕಾಶ ಮಾಡಿಕೊಡುವ ಸಾಧ್ಯತೆ ಇರುತ್ತದೆ ಈ ಕುರಿತು ಮಾಹಿತಿ ಲಭ್ಯವಾದ ತಕ್ಷಣ ನಮ್ಮ ಪುಟದಲ್ಲಿ ಮಾಹಿತಿ ಹಂಚಿಕೊಳ್ಳಲಾಗುವುದು.

ಇತರೆ ವಿಷಯಗಳು:

ಸರ್ಕಾರಿ ಶಿಕ್ಷಕ ಕೆಲಸ ಕಾಯುತ್ತಿದ್ದವವರಿಗೆ ಭರ್ಜರಿ ಗುಡ್‌ ನ್ಯೂಸ್!!‌ ಮತ್ತಷ್ಟು ಶಿಕ್ಷಕರ ನೇಮಕಕ್ಕೆ ಮಧು ಬಂಗಾರಪ್ಪ ಭರವಸೆ

ಪ್ರತಿ ಗ್ರಾಮೀಣ ಕುಟುಂಬದವರಿಗೂ ಬಂತು ಹೊಸ ಯೋಜನೆ!! ಕೇಂದ್ರ ಸರ್ಕಾರದಿಂದ ಮತ್ತೊಂದು ಯೋಜನೆ ಜಾರಿ

ಪಿಎಸ್‌ಐ ಮರು ಪರೀಕ್ಷೆ ಮುಂದೂಡಿಕೆ: ಜನವರಿ 23ಕ್ಕೆ‌ ಡೇಟ್ ಫಿಕ್ಸ್!! ಗೃಹ ಸಚಿವ ಜಿ.ಪರಮೇಶ್ವರ

Leave a Comment