ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ದೇಶಾದ್ಯಂತ ಗ್ಯಾಸ್ ಸಂಪರ್ಕ ಪಡೆಯುತ್ತಿರುವ ಎಲ್ಲಾ ಬಳಕೆದಾರರಿಗೂ ಸರ್ಕಾರದಿಂದ ಒಂದು ಆದೇಶ ಬಂದಿತ್ತು. ಅದೇನೆಂದರೆ ಎಲ್ ಪಿಜಿ ಗ್ಯಾಸ್ ಸಂಪರ್ಕ ಪಡೆಯಲು ಇ ಕೆವೈಸಿ ಕಡ್ಡಾಯ ಎಂದು ಘೋಷಣೆ ಮಾಡಿತ್ತು. ಇದೀಗ ಈ ಪ್ರಕ್ರಿಯೆ ಮಾಡಿಸಲು ಇದೇ ತಿಂಗಳು ಕೊನೆಯ ಗಡುವಾಗಿತ್ತು. ಆದರೆ ಈ ದಿನಾಂಕವನ್ನು ಮುಂಡೂಡಲಾಗಿದೆ. ಈ ಕುರಿತು ವಿವರವಾದ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

ಅಡುಗೆ ಅನಿಲ (LPG) ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ (Aadhar E-KYC) ಮಾಡಿಸಲು ಅಂತಿಮ ದಿನಾಂಕವನ್ನು ಕೇಂದ್ರ ಸರ್ಕಾರವು ನಿಗದಿಪಡಿಸಿರುವುದಿಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಇ-ಕೆವೈಸಿ ಮಾಡಿಸಬಹುದಾಗಿದೆ.
ಇದನ್ನೂ ಸಹ ಓದಿ: ಕನಸಿನ ಮನೆ ಕಟ್ಟುವವರಿಗೆ ಕೇಂದ್ರದಿಂದ ಬಂಪರ್ ಗಿಫ್ಟ್!! ಡಿಸೆಂಬರ್ 31 ರೊಳಗೆ ನೋಂದಾಯಿಸಿ
ಸಾರ್ವಜನಿಕರು ಆತಂಕದಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ. ಆದ್ದರಿಂದ ಅನಾವಶ್ಯಕವಾಗಿ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ ಹಾಗೂ ಸಿಲಿಂಡರ್ ಅನ್ನು ಮನೆಗೆ ಡೆಲಿವರಿ ಪಡೆಯುವ ವೇಳೆಯಲ್ಲಿ ಕೂಡ ಇ-ಕೆವೈಸಿ ಮಾಡಿಸಲು ಅವಕಾಶವಿರುತ್ತದೆ.
ಅಲ್ಲದೇ ಹೆಲೋ ಬಿಪಿಸಿಎಲ್, ಇಂಡಿಯನ್ ಆಯ್ಲ್ ಒನ್ ಮತ್ತು ವಿಟ್ರನ್ ಹೆಚ್‍ಪಿ ಗ್ಯಾಸ್ ಈ ಮೊಬೈಲ್ ಆಪ್‍ಗಳ ಮೂಲಕ ಇ-ಕೆವೈಸಿ ಮಾಡಿಸಬಹುದಾಗಿದೆ ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಅವಿನ್ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತರೆ ವಿಷಯಗಳು:
ಚಿನ್ನ ಖರೀದಿಗೆ ಆಧಾರ್ ಮತ್ತು ಪ್ಯಾನ್ ಕಾರ್ಡ್ ಕಡ್ಡಾಯ!! ಆದಾಯ ತೆರಿಗೆ ಇಲಾಖೆಯಿಂದ ಆದೇಶ
ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್! ಕೇಂದ್ರ ಸರ್ಕಾರದ ಹೊಸ ಯೋಜನೆಯಲ್ಲಿ ಸಂಪೂರ್ಣ ಲಾಭ