rtgh

ರಾಜ್ಯದಲ್ಲಿ ಉಚಿತ ಪ್ರಯಾಣ ಯೋಜನೆಗೆ ಭಾರೀ ಮೆಚ್ಚುಗೆ: ಹೆಚ್ಚಿನ ಬಸ್‌ ಖರೀದಿಸಲು ಸಿಎಂ ಸೂಚನೆ

ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭಾರಿ ಸ್ಪಂದನೆ ಮತ್ತು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ 5,600 ಹೊಸ ಬಸ್‌ಗಳನ್ನು ಖರೀದಿಸುವ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

CM instructs to buy more buses

ಶಕ್ತಿ ಯೋಜನೆ ಆರಂಭವಾದ ನಂತರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 15ರಷ್ಟು ಹೆಚ್ಚಳವಾಗಿದೆ.

ಶೀಘ್ರವೇ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದು, ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ. ಶಕ್ತಿ ಯೋಜನೆ ಆರಂಭವಾದ ನಂತರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 15ರಷ್ಟು ಹೆಚ್ಚಳವಾಗಿದೆ. ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಹೆಚ್ಚುವರಿ ವೇಳಾಪಟ್ಟಿ ಮತ್ತು ಬಸ್‌ಗಳನ್ನು ಒದಗಿಸುವಂತೆ ಆದೇಶಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನು ಓದಿ: ವಿದ್ಯುತ್ ಬಿಕ್ಕಟ್ಟಿನ ಮಧ್ಯೆ ಡಿಕೆಶಿ ಭರವಸೆ..! ಬೆಸ್ಕಾಂ ಕೈಗಾರಿಕಾ ಸಂಸ್ಥೆಗಳ ಚಟುವಟಿಕೆಗೆ ನಿರಂತರ ವಿದ್ಯುತ್


ಸಾರಿಗೆ ಇಲಾಖೆಯ ಆದಾಯ ಗುರಿ ಸಂಗ್ರಹ ಹಾಗೂ ರಸ್ತೆ ಸಾರಿಗೆ ನಿಗಮಗಳ ಹಣಕಾಸು ನಿರ್ವಹಣೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ವಾಹನ ತಪಾಸಣೆಯಿಂದ 83 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಎಲ್ಲ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಮುಖ್ಯಮಂತ್ರಿ.

ಇತರೆ ವಿಷಯಗಳು:

ಹಬ್ಬಕ್ಕೆ ಮೋದಿ ಸರ್ಕಾರದ ಗುಡ್ ನ್ಯೂಸ್..! ಈ ಆಹಾರ ಪದಾರ್ಥಗಳ ಬೆಲೆಯಲ್ಲಿ ಯಾವುದೇ ಏರಿಕೆ ಇಲ್ಲ

ಯುಜಿ, ಪಿಜಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೇವೆ ರದ್ದು..! ಸುಗ್ರೀವಾಜ್ಞೆ ಹೊರಡಿಸಿದ ಸಚಿವ ಸಂಪುಟ

Leave a Comment