ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದ ಖಾತರಿ ಯೋಜನೆಗಳು ಯಶಸ್ವಿಯಾದ ನಂತರ , ಈಗ ಎಲ್ಲಾ ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳು ಈ ಭರವಸೆ ಯೋಜನೆಯನ್ನು ವಿಧಾನಸಭಾ ಚುನಾವಣೆಗೆ ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಖಾತ್ರಿ ಯೋಜನೆಗಳ ಪೈಕಿ 4 ಯೋಜನೆಗಳನ್ನು ಜಾರಿಗೆ ತಂದಿದೆ.
ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವನ್ನು ಪ್ರಸ್ತುತ ನೇರ ವರ್ಗಾವಣೆ (ಡಿಬಿಟಿ) ಮೂಲಕ ಹೆಚ್ಚಿನ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೆ ಇನ್ನೂ ಕೆಲವರಿಗೆ ಎರಡನೇ ಕಂತಿನ ಹಣ ಬಂದಿಲ್ಲ. ಅಂತಹ ಮಹಿಳೆಯರು ಚಿಂತಿಸಬೇಕಾಗಿಲ್ಲ. ಯಾಕೆಂದರೆ ಖುದ್ದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆ ಮಾಲೀಕರಿಗೆ ಪ್ರತಿ ತಿಂಗಳು 2000 ರೂ. ಕರ್ನಾಟಕ ರಾಜ್ಯದಲ್ಲಿ ಆಗಸ್ಟ್ ತಿಂಗಳಿನಿಂದಲೇ ಗೃಹ ಲಕ್ಷ್ಮಿ ಯೋಜನೆ ಜಾರಿಯಾಗಿದೆ. ಅಲ್ಲದೆ, ಬಹುತೇಕರಿಗೆ ಸೆಪ್ಟೆಂಬರ್ ತಿಂಗಳಿನಲ್ಲಿ ಗೃಹಿಣಿಯರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗಿದೆ.
ಇದೀಗ ಎರಡನೇ ಕಂತನ್ನು ಅಕ್ಟೋಬರ್ 17ರಿಂದ ಗೃಹಿಣಿಯರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಆದರೆ ಕೆಲವರಿಗೆ ಇನ್ನೂ ಎರಡನೇ ಕಂತಿನ ಹಣ ಬಂದಿಲ್ಲ. ಇನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹ ಲಕ್ಷ್ಮಿ ಯೋಜನೆ ಬಗ್ಗೆ ಮಾತನಾಡಿದ್ದಾರೆ.
ಗೃಹ ಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಎಂದು ಗೊಂದಲ, ಆತಂಕ ಬೇಡ. ವಿಳಂಬವಾದರೂ ಎಲ್ಲ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗಲಿದೆ. ಆದರೆ ನಿಮ್ಮ ಖಾತೆಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಒಮ್ಮೆ ಪರಿಶೀಲಿಸಿಕೊಳ್ಳಿ ಎಂದು ಹೇಳಿದರು.
ಮಹಿಳೆಯರು ತಮ್ಮ ಬ್ಯಾಂಕ್ ಖಾತೆ ಹೊಂದಿರುವ ಬ್ಯಾಂಕ್ ಗಳಿಗೆ ತೆರಳಿ ವಿಚಾರಿಸುವುದು ಉತ್ತಮ. ಸದ್ಯ ಪ್ರತಿ ಜಿಲ್ಲೆಗೂ ಹಣ ವರ್ಗಾವಣೆ ನಡೆಯುತ್ತಿದೆ. ಆರ್‌ಬಿಐ ಹಣ ವರ್ಗಾವಣೆಗೆ ವ್ಯವಹಾರ ಮಿತಿಗಳನ್ನು ವಿಧಿಸಿದೆ, ಇದರಿಂದ ದಿನಕ್ಕೆ ಕೇವಲ ನಾಲ್ಕು ಲಕ್ಷ ಜನರಿಗೆ ಮಾತ್ರ ವರ್ಗಾಯಿಸಬಹುದು.
ಇದನ್ನೂ ಸಹ ಓದಿ: ರೈತರ ನೆರವಿಗೆ ಕೇಂದ್ರ ಸರ್ಕಾರ ರಸಗೊಬ್ಬರಗಳ ಮೇಲೆ ಭಾರೀ ಸಬ್ಸಿಡಿ ನೀಡಲು ಅನುಮೋದನೆ
ಮೊದಲ ಮತ್ತು ಎರಡನೇ ಕಂತು ಪಡೆಯದ ಮಹಿಳೆಯರಿಗೆ ಎರಡು ತಿಂಗಳ ಹಣ 4000 ಸೇರಿ ಖಾತೆಗೆ ಜಮೆಯಾಗುವ ಸಾಧ್ಯತೆ ಇದೆ. ಆದರೆ ಯಾವಾಗಲೂ ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ವಿಚಾರಿಸುವುದು ಉತ್ತಮ. ಈ ಹಿಂದೆ ಸಿಎಂ ಸಿದ್ದರಾಮಯ್ಯ ಬ್ಯಾಂಕ್ ಖಾತೆಗೆ ಎರಡು ತಿಂಗಳ ಹಣ ಜಮಾ ಆಗುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು.
ಗೃಹ ಲಕ್ಷ್ಮಿ ಯೋಜನೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಮಹಿಳೆಯರಿಗೆ 10000 ರೂ
ಪಂಚ ರಾಜ್ಯಗಳ ವಿಧಾನಸಭೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಭರ್ಜರಿ ಆಫರ್ ಗಳನ್ನು ಘೋಷಿಸುತ್ತಿವೆ. ಇದೀಗ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಜನತೆಗೆ ಭಾರೀ ಭರವಸೆ ನೀಡಿದ್ದಾರೆ. ನಾವು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವರ್ಷಕ್ಕೆ 10,000 ಮತ್ತು 500 ರೂ.ಗೆ ಸಿಲಿಂಡರ್ ನೀಡುತ್ತೇವೆ ಎಂದು ಘೋಷಿಸಿದರು.
ಜುಂಜುನುದಲ್ಲಿ ಪಕ್ಷದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಜ್‌ಥಾನ್ ಸಿಎಂ ಗೆಹ್ಲೋಟ್, “ಗೃಹ ಲಕ್ಷ್ಮಿ ಗ್ಯಾರಂಟಿ” ಯೋಜನೆಯಡಿ, ಕುಟುಂಬದ ಮಹಿಳೆಗೆ ವಾರ್ಷಿಕ ಕಂತುಗಳಲ್ಲಿ 10,000 ರೂ ನೀಡಲಾಗುವುದು ಎಂದು ಘೋಷಿಸಿದರು. ಈ ಹಿಂದೆ ಉಜ್ವಲ ಯೋಜನೆಯಡಿ ಸಿಲಿಂಡರ್‌ಗೆ ಮಾತ್ರ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ನಾವು ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ವಿಸ್ತರಿಸುತ್ತೇವೆ. ಪ್ರತಿ ಮನೆಗೆ 500 ರೂ.ಗೆ ಸಿಲಿಂಡರ್ ಸಿಗಲಿದೆ ಎಂದರು.
ರಾಜ್ಯದ 1.05 ಕೋಟಿ ಕುಟುಂಬಗಳಿಗೆ 500 ರೂ.ಗೆ ಅಡುಗೆ ಅನಿಲ ನೀಡುವುದಾಗಿ ಭರವಸೆ ನೀಡಿದ್ದಾರೆ. ನವೆಂಬರ್ 25 ರಂದು ರಾಜಸ್ಥಾನ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.
ಇತರೆ ವಿಷಯಗಳು:
ಐಟಿ ದಾಳಿಯಲ್ಲಿ ವಶಪಡಿಸಿಕೊಂಡ ಹಣ ಬಿಜೆಪಿ ನಾಯಕರಿಗೆ ಸೇರಿದ್ದು: ಡಿ.ಕೆ ಶಿವಕುಮಾರ್