rtgh

ಇಂದಿನಿಂದ ಡಿ. 13 ರವರೆಗೆ ಅಬ್ಬರಿಸಲಿದ್ದಾನೆ ವರುಣ..! ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ‌ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯ ಅಬ್ಬರ ಶುರುವಾಗಲಿದೆ. ಡಿಸೆಂಬರ್ 13 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ 1 ವಾರದವರೆಗೆ ಭಾರೀ ಮಳೆಯ ಎಚ್ಚರಿಕೆ. ಯಾವ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ನಾವು ನಿಮಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ.

Heavy Rainfall Alert

ದಕ್ಷಿಣ ಒಳನಾಡಿನ ಕೆಲವು ಭಾಗಗಳು, ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರದಲ್ಲಿ ಅಲ್ಲಲ್ಲಿ ಮಳೆಯಾಗಲಿದೆ (ಕರ್ನಾಟಕ ಹವಾಮಾನ ಮುನ್ಸೂಚನೆ). ಉತ್ತರ ಒಳನಾಡಿನ ವಿಜಯನಗರ ಜಿಲ್ಲೆಯಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಕೊಪ್ಪಳ, ಗದಗ, ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಇರುತ್ತದೆ.

ಮಲೆನಾಡಿನ ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಸದ್ದು ಮಾಡಲಿದೆ. ಅಲ್ಲದೇ ಸಮುದ್ರದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.


ಇದನ್ನೂ ಸಹ ಓದಿ: ಇನ್ನೂ ಹೆಚ್ಚುವರಿಯಾಗಿ 50 ಡಯಾಲಿಸಿಸ್ ಕೇಂದ್ರಗಳನ್ನು 57 ಹೊಸ ತಾಲೂಕುಗಳಲ್ಲಿ ತೆರೆಯಲು ಮುಂದಾದ ರಾಜ್ಯ ಸರ್ಕಾರ

ಕರಾವಳಿಯಾದ್ಯಂತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಒಣ ಹವೆ ಮುಂದುವರೆಯಲಿದೆ.ಬೆಂಗಳೂರಿನಲ್ಲಿ ಹೆಚ್ಚಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿ ಸಣ್ಣ ಮಳೆಯಾಗಲಿದೆ.

ಗರಿಷ್ಠ ತಾಪಮಾನ 28 ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ದಕ್ಷಿಣ ಒಳನಾಡಿನ ಕೆಲವೆಡೆ ಗುರುವಾರ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳಭಾಗದಲ್ಲಿ ಬರ ಮುಂದುವರಿದಿದೆ.

ವಿಜಯಪುರದಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಕಡಿಮೆ ತಾಪಮಾನ ದಾಖಲಾಗಿದೆ.ಇಂದಿನಿಂದ ಡಿಸೆಂಬರ್ 13ರವರೆಗೆ ನಿರಂತರವಾಗಿ ಮಳೆಯಾಗಲಿದೆ.ಕೆಲವು ಜಿಲ್ಲಾಡಳಿತಗಳಿಗೂ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇತರೆ ವಿಷಯಗಳು:

ಸುಗ್ಗಿ ಹಬ್ಬದ ಸಮಯಕ್ಕೆ ಇಂದಿರಾ ಕ್ಯಾಂಟೀನ್‌ನಲ್ಲಿ ರಾಗಿ ಮುದ್ದೆ ಭಾಗ್ಯ..!

ಇನ್ಮುಂದೆ ಮುದ್ರಾಂಕ ಶುಲ್ಕ 5 ಪಟ್ಟು ಹೆಚ್ಚಳ: ಕರ್ನಾಟಕ ಅಧಿವೇಶನದಲ್ಲಿ ಮಸೂದೆ ಮಂಡನೆ

Leave a Comment