rtgh

ಹೊಸ ವರ್ಷಕ್ಕೆ ಹಿಂಗಾರು ಮಳೆ ಆಗಮನ!! ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ರಾಜ್ಯದಲ್ಲಿ ಕೆಲವು ದಿನಗಳು ಕಾಲ ಮರೆಯಾಗಿದ್ದ ಮಳೆಯು ಹೊಸ ವರ್ಷಕ್ಕೆ ಮತ್ತೆ ಆಗಮಿಸುವ ಮುನ್ಸೂಚನೆ ನೀಡಿದ್ದಾರೆ. ಜನವರಿ 1 ರಿಂದ ಹೆಚ್ಚಿನ ಮಳೆಯಾಗುವ ಸಾಧ್ಯಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ಈ ಬಾರೀ ವಾಡಿಕೆಯಂತೆ ಮಳೆಯಾಗದೇ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಇದೀಗ ರಾಜ್ಯದಲ್ಲಿ ಚಳಿ ವಾತಾವರಣ ಹೆಚ್ಚಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

Heavy rains in these districts for the new year

ಹೊಸ ವರ್ಷಕ್ಕೆ ಹಿಂಗಾರು ಮಳೆ ತಂಪೆರೆಯಲಿದ್ದಾನೆ. ಈವರೆಗೆ ಶುಷ್ಕ ವಾತಾವರಣವನ್ನೇ ಕಂಡಿದ್ದ ಉತ್ತರ ಒಳನಾಡಿಗೂ ಈ ಬಾರಿ ಮಳೆ ಸುರಿಯುವ ಲಕ್ಷಣಗಳು ಕಂಡು ಬಂದಿವೆ. ಈ ಭಾಗದಲ್ಲಿ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ವಿಜಯಪುರ ಮತ್ತು ಕೊಪ್ಪಳ ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಆಗಲಿದೆ. ಹಲವೆಡೆ ತುಂತುರು ಮಳೆ ಸಂಭವವು ಇದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ ಜನವರಿ 1ರಿಂದ ಎರಡು ದಿನ ಕರಾವಳಿ ಭಾಗ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹ ಹಗುರದಿಂದ ಸಾಧಾರಣವಾಗಿ ಮಳೆ ಸುರಿಯಲಿದೆ. ರಾಜ್ಯದ ಗರಿಷ್ಠ ತಾಪಮಾನ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಚಳಿಯ ವಾತಾವರಣ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆ ಇದೆ.

ಇದನ್ನೂ ಸಹ ಓದಿ: ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ: ಸುಪ್ರಿಂ ಕೋರ್ಟಿನಿಂದ ಬಂತು ಮಹತ್ವದ ತೀರ್ಪು


ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ:

ಈ ಒಳನಾಡಿನ ಜಿಲ್ಲೆಗಳಿಗೂ ಮಳೆ ದಕ್ಷಿಣ ಒಳನಾಡಿನಲ್ಲೂ ಜನವರಿ ಮೊದಲ ಎರಡು ದಿನ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ಎರಡು ದಿನ ಪೈಕಿ ಜನವರಿ 1ರಂದು ಚಾಮರಾಜನಗರ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆ ಆಗಲಿದೆ.

ಜನವರಿ 2ರಂದು ಮೇಲಿನ ಮೂರು ಜಿಲ್ಲೆಗಳು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಹಾಸನ, ವಿಜಯನಗರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಲವೆಡೆ ಹಗುರದಿಂದ ಸಾಧಾರಣವಾಗಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹ ಹಗುರದಿಂದ ಸಾಧಾರಣವಾಗಿ ಮಳೆ ಸುರಿಯಲಿದೆ. ಒಂದೆರೆಡು ಕಡೆಗಳಲ್ಲಿ ಜೋರು ಮಳೆಯ ದರ್ಶನವು ಈ ವೇಳೆ ಆಗಲಿದೆ. ಕರಾವಳಿ ಭಾಗದಲ್ಲಿ ಇತರ ಭಾಗಕ್ಕಿಂತ ಹೆಚ್ಚು ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಮಳೆಯ ನಡುವೆ ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಬೆಳಗ್ಗೆ ಮತ್ತು ರಾತ್ರಿ ಹೊತ್ತಿಗೆ ಚಳಿಯ ವಾತಾವರಣ, ದಟ್ಟ ಮಂಜು ಕಂಡು ಬರಲಿದೆ. ಮಧ್ಯಾಹ್ನ ಹೊತ್ತಿನಲ್ಲಿ ಎಂದಿನಂತೆ ಬಿಸಲಿನ ಕಾವು ಹೆಚ್ಚಿರಲಿದೆ. ಉತ್ತರ ಒಳನಾಡಿನಲ್ಲಿ ಶುಷ್ಕ ವಾತಾವರಣ ಕಂಡು ಬರಲಿದೆ.

ಇತರೆ ವಿಷಯಗಳು:

Leave a Comment