ನಮಸ್ಕಾರ ಸ್ನೇಹಿತರೆ ಎಲ್ಲರಿಗೂ ತಿಳಿದಿರುವ ಹಾಗೆ ರಾಜ್ಯ ಸರ್ಕಾರದ ಎರಡು ಮಹತ್ವಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಹಣವು ಬ್ಯಾಂಕ್ ಖಾತೆಗೆ ಜಮಾ ಆಗಬೇಕಾದರೆ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಜೊತೆಗೆ ಲಿಂಕ್ ಆಗಿರಬೇಕು. ಅದರಂತೆ ಇವತ್ತಿನ ಲೇಖನದಲ್ಲಿ ಮುಖ್ಯವಾದ ಮಾಹಿತಿಯನ್ನು ತಿಳಿಸಲಾಗುತ್ತಿದೆ.
ಆಧಾರ್ ಕಾರ್ಡ್ ಲಿಂಕ್ ಆಗಿರುವುದು ಮುಖ್ಯ :
ಇತ್ತೀಚಿನ ದಿನಗಳಲ್ಲಂತೂ ನೀವು ಇತರ ಯಾವುದೇ ಹಣಕಾಸಿನ ವ್ಯವಹಾರಗಳನ್ನು ಬ್ಯಾಂಕ್ ಖಾತೆಯಿಂದ ಮಾಡಬೇಕಾದರೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಆಧಾರ್ ಕಾರ್ಡ್ ಕೇವಲ ಬ್ಯಾಂಕ್ ಖಾತೆಗೆ ಮಾತ್ರ ಸಂಬಂಧಿಸಿದ ಆಸ್ತಿ ನೋಂದಣಿ ಮಾಡಿಕೊಳ್ಳಲು ಹಾಗೂ ಹೊಸದಾಗಿ ಬ್ಯಾಂಕ್ ಖಾತೆಯನ್ನು ತೆರೆಯುವುದಕ್ಕೂ ಸಹ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯವಾಗಿ ಮಾಡಿಸಬೇಕು. ಇದೀಗ ಬ್ಯಾಂಕ್ ಖಾತೆಗೆ ಮಾತ್ರವಲ್ಲದೆ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಮಾಡಬೇಕೆಂದು ಅಧಿಕೃತ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.
ಇದನ್ನು ಓದಿ : 7 ನೇ ವೇತನ ಆಯೋಗ: ಸರ್ಕಾರಿ ನೌಕರರಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್, ನಿಮ್ಮ ಖಾತೆಗೆ ಬರಲಿದೆ2.18 ಲಕ್ಷ
ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವ ವಿಧಾನ :
ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ಎಲ್ಲವೂ ಕೂಡ ಬಹಳ ಮುಖ್ಯವಾಗಿರುತ್ತದೆ ಅದರಲ್ಲಿಯೂ ಮುಖ್ಯವಾಗಿ ಎಲ್ಲವೂ ಒಂದಕ್ಕೊಂದು ಲಿಂಕ್ ಆಗಿರುವುದು ಹೆಚ್ಚು ಪ್ರಮುಖವಾಗಿದೆ. ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದೆ ಇದ್ದರೆ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯ ಅನ್ನಭಾಗ್ಯ ಯೋಜನೆಯ ಹಣವು ಕೂಡ ಬ್ಯಾಂಕ್ ಖಾತೆಗೆ ತಲುಪುವುದಿಲ್ಲ ಹಾಗಾಗಿ ಆಧಾರ್ ಲಿಂಕ್ ರೇಷನ್ ಕಾರ್ಡ್ ಜೊತೆಗೆ ತಕ್ಷಣವೇ ಮಾಡಿಸಿಕೊಳ್ಳಬೇಕು.
ಆಧಾರ್ ಕಾರ್ಡನ್ನು ರೇಷನ್ ಕಾರ್ಡ್ ಗೆ ಸುಲಭವಾಗಿ ಆನ್ಲೈನ್ ಮೂಲಕ ಲಿಂಕ್ ಮಾಡಬಹುದಾಗಿತ್ತು ಇದಕ್ಕೆ ಮೊದಲು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು https://ahara.kar.nic.in/Home/EServices ಈ ವೆಬ್ ಸೈಟ್ ಗೆ ಭೇಟಿ ನೀಡಿ ರೇಷನ್ ಕಾರ್ಡ್ ನಂಬರ್ ಅನ್ನು ಎಂಟರ್ ಮಾಡುವ ಮೂಲಕ ಕೆಲವೊಂದು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬಹುದಾಗಿದೆ.
ಹೀಗೆ ಆಧಾರ್ ಕಾರ್ಡ್ ಎನ್ನುವುದು ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆಯಲು ಮುಖ್ಯವಾಗಿದ್ದು ಅದರಲ್ಲಿಯೂ ಮುಖ್ಯವಾಗಿ ಆಧಾರ್ ಕಾರ್ಡ್ ಅನ್ನು ಎಲ್ಲಾ ದಾಖಲೆಗಳೊಂದಿಗೆ ಲಿಂಕ್ ಮಾಡುವುದು ಅಗತ್ಯವಾಗಿದೆ. ಅದರಂತೆ ಇವತ್ತಿನ ಲೇಖನದಲ್ಲಿ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಅನ್ನು ಸುಲಭವಾಗಿ ಮನೆಯಲ್ಲಿ ಕುಳಿತು ಹೇಗೆ ಲಿಂಕ್ ಮಾಡಬಹುದು ಎಂಬುದರ ಬಗ್ಗೆ ತಿಳಿಸಲಾಗಿತ್ತು ಈ ಮಾಹಿತಿಯನ್ನು ನಿಮ್ಮೆಲ್ಲ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಈ ಉದ್ಯೋಗಿಗಳ ಕೆಲಸಕ್ಕೆ ಬಂತು ಕುತ್ತು: 30000 ನೌಕರರು ಕೆಲಸದಿಂದ ವಜಾ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
- ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ: ಸುಪ್ರಿಂ ಕೋರ್ಟಿನಿಂದ ಬಂತು ಮಹತ್ವದ ತೀರ್ಪು