rtgh

ಅರಣ್ಯ ಇಲಾಖೆಯಿಂದ ಬಿಗ್‌ ಅಪ್ಡೇಟ್:‌ ವನ್ಯಜೀವಿ ಅಂಗಾಂಗ ಮರಳಿಸಲು ಮತ್ತೆ ಡೆಡ್‌ಲೈನ್‌, ಕೊನೆಯ ದಿನ ಯಾವಾಗ? ಇಲ್ಲಿದೆ ಕಂಪ್ಲೀಟ್‌ ಡೀಟೆಲ್ಸ್

ಹಲೋ ಸ್ನೇಹಿತರೇ ನಮ್ಮ ಈ ಲೇಖನಕ್ಕೆ ಸ್ವಾಗತ, ಅಕ್ರಮವಾಗಿ ವನ್ಯಜೀವಿಗಳ ಅಂಗಾಂಗಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಅಪರಾಧ. ಈ ಹಿನ್ನೆಲೆ ಅರಣ್ಯ ಇಲಾಖೆಯು ಜನರಿಗೆ ಹಿಂದಿರುಗಿಸಲು ಡೆಡ್‌ಲೈನ್‌ ನೀಡಿದೆ. ಈ ಡೆಡ್‌ ಲೈನ್‌ ಒಳಗೆ ಮತ್ತೆ ಅರಣ್ಯ ಇಲಾಖೆಗೆ ಒಪ್ಪಿಸದಿದ್ದರೆ ಕಠಿಣ ಕ್ರಮ, ಇದರ ಎಲ್ಲಾ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಓದಿ.

Deadline again for returning wildlife organ

ವನ್ಯಜೀವಿ ಅಂಗಾಂಗ ಮರಳಿಸಲು ಡೆಡ್‌ಲೈನ್‌

ಸಾರ್ವಜನಿಕರು ಅಕ್ರಮವಾಗಿ ವನ್ಯಜೀವಿಗಳ ಅಂಗಾಂಗಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಅಪರಾಧ. ಈ ಹಿನ್ನೆಲೆ ಅರಣ್ಯ ಇಲಾಖೆಯು ಜನರಿಗೆ ಹಿಂದಿರುಗಿಸಲು ಡೆಡ್‌ಲೈನ್‌ ನೀಡಿದೆ. ಜನವರಿ 16 ರಿಂದ ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ. ಆ ಬಳಿಕ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಮಾಹಿತಿ ನೀಡಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಲಿ, ಚಿರತೆ ಉಗುರು, ಜಿಂಕೆ ಕೊಂಬು, ಆನೆ ದಂತ, ಕೂದಲು ಇತ್ಯಾದಿ ವನ್ಯಜೀವಿ ಅಂಗಾಂಗಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಳ್ಳುವುದು, ವನ್ಯಜೀವಿ ಮಾಂಸ ಭಕ್ಷಣೆ ಅಪರಾಧವಾಗಿದ್ದು, 1978ರಲ್ಲಿ ಮತ್ತು 2003ರಲ್ಲಿ ಈ ವಸ್ತುಗಳಿದ್ದರೆ ಘೋಷಣೆ ಮಾಡಿ ಹಕ್ಕು ಪ್ರಮಾಣ ಪತ್ರ ಪಡೆಯಲು ಅವಕಾಶ ನೀಡಲಾಗಿತ್ತು. ಆಗ ಘೋಷಣೆ ಮಾಡಿಕೊಳ್ಳದೆ ಕೆಲವರು ವಿವಿಧ ವನ್ಯಜೀವಿ ಅಂಗಾಂಗದ ಟ್ರೋಫಿ, ಕೊಂಬು ಇತ್ಯಾದಿ ಹೊಂದಿದ್ದು, ಇದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದರು.

ಇದನ್ನೂ ಸಹ ಓದಿ: ಭಾರತೀಯ ರೈಲ್ವೆ ಹೊಸ ನಿಯಮ: ಪ್ರಯಾಣಿಕರಿಗೆ ಹೊಸ ಸೌಲಭ್ಯ


ಕಾಯಿದೆಯ ಅರಿವಿಲ್ಲದೆ ಮುಗ್ಧ ಜನರು ಸಂಕಷ್ಟಕ್ಕೆ ಸಿಲುಕಬಾರದು ಎಂದು ಈಗ ಒಂದು ಬಾರಿಯ ಅವಕಾಶ ನೀಡಲು ತೀರ್ಮಾನಿಸಲಾಗಿದ್ದು, ಇವುಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ ಕಲ್ಪಿಸಲಾಗಿದೆ. ಜ.16ರಿಂದ 3 ತಿಂಗಳುಗಳ ಕಾಲ ಈ ವಸ್ತುಗಳನ್ನು ಹತ್ತಿರದ ಅರಣ್ಯ ಇಲಾಖೆಯ ಕಚೇರಿಗೆ ಮರಳಿಸಬಹುದು ಮತ್ತು ಮರಳಿಸಿದಾಗ ಅವರಿಗೆ ಸ್ವೀಕೃತಿ ನೀಡಲಾಗುವುದು ಎಂದು ತಿಳಿಸಿದರು.

ನಿರ್ದಾಕ್ಷಿಣ್ಯವಾಗಿ ಕ್ರಮ

ಸರ್ಕಾರ ನೀಡಿರುವ ಗಡುವಿನ ನಂತರ ಯಾರೇ ಇಂತಹ ವನ್ಯಜೀವಿ ಅಂಗಾಂಗದ ಆಭರಣ ಧರಿಸಿದರೆ, ಮನೆಗಳಲ್ಲಿ ಅಘೋಷಿತ ಟ್ರೋಫಿ, ಇತ್ಯಾದಿ ಹೊಂದಿದ್ದರೆ ದೂರು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು. ಹೀಗಾಗಿ ಎಲ್ಲರೂ ಒಂದು ಬಾರಿಯ ಅವಕಾಶ ಬಳಸಿಕೊಳ್ಳುವಂತೆ ಮನವಿ ಮಾಡಿದರು.

ಇತರೆ ವಿಷಯಗಳು

Leave a Comment