rtgh

ಕರ್ನಾಟಕ ಎಂಬ ಹೆಸರಿಗೆ 50 ವರ್ಷಗಳ ಸಂಭ್ರಮ: ರಾಜ್ಯ ಸರ್ಕಾರದಿಂದ ಹೊಸ ಆದೇಶ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನ.1ರಂದು ಜಿಲ್ಲಾಧಿಕಾರಿಗಳು ಮಾರ್ಗಸೂಚಿಯಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್.ತಂಡರಗಿ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Karnataka Rajyotsava

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ . ಅದರ ಅಂಗವಾಗಿ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗಿದೆ.

ಅದರಂತೆ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತದ ವತಿಯಿಂದ ಈ ಕೆಳಕಂಡ ಅಂಶಗಳ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಈ ಮೂಲಕ ಸೂಚಿಸಲಾಗಿದೆ.

ಇದನ್ನೂ ಸಹ ಓದಿ: ಇದನ್ನೂ ಸಹ ಓದಿ: ಅನ್ನಭಾಗ್ಯಕ್ಕೆ ಬಿತ್ತು ಬ್ರೇಕ್.!‌ 3 ಲಕ್ಷಕ್ಕೂ ಅಧಿಕ ಪಡಿತರ ಚೀಟಿದಾರರಿಗೆ ಈ ತಿಂಗಳಿನಿಂದ ಹಣ ಇಲ್ಲ.!


1. ನವೆಂಬರ್ 1 ರಂದು ಬೆಳಿಗ್ಗೆ 9.00 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ ನಾದಗೀತೆ ಪ್ರಸಾರವಾಗಲಿದೆ. ಆ ಸಮಯದಲ್ಲಿ ಕನ್ನಡ ನಾಡಿನ ಎಲ್ಲಾ ಪ್ರಜೆಗಳು ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಎದ್ದುನಿಂತು ರಾಷ್ಟ್ರಗೀತೆಗೂ ಗೌರವ ಸಲ್ಲಿಸುವಂತೆ ವಿನಂತಿಸುತ್ತಾರೆ.

2. ನವೆಂಬರ್ 1 ರಂದು ಸಂಜೆ 5.00 ಗಂಟೆಗೆ ನಿಮ್ಮ ಜಿಲ್ಲೆಯ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶದಲ್ಲಿ ಹಾರಿಸುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವವನ್ನು ಆಚರಿಸಲು ವಿನಂತಿ.

3. ನವೆಂಬರ್ 1 ರಂದು ಸಂಜೆ 7.00 ಗಂಟೆಗೆ ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮನೆ, ಕಚೇರಿ ಮತ್ತು ಅಂಗಡಿಗಳ ಮುಂದೆ ಕನ್ನಡ ಜ್ಯೋತಿಯನ್ನು ದೀಪ ಬೆಳಗಿಸುವ ಮೂಲಕ ಬೆಳಗಿಸಲಾಗುವುದು.

ಎಲ್ಲಾ ಜಿಲ್ಲಾಧಿಕಾರಿಗಳು/ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮೇಲಿನ ಎಲ್ಲಾ ಅಂಶಗಳ ಬಗ್ಗೆ ಸೂಕ್ತ ಸುತ್ತೋಲೆಗಳನ್ನು ಹೊರಡಿಸಲು ಮತ್ತು ಜಿಲ್ಲೆಯ ಎಲ್ಲಾ ನಾಗರಿಕರು ಮತ್ತು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಲಾಗಿದೆ.

ಇತರೆ ವಿಷಯಗಳು:

ಬ್ರೇಕಿಂಗ್‌ ನ್ಯೂಸ್..! ಎರಡೂವರೆ ವರ್ಷಗಳ ನಂತರ ಸಿದ್ದರಾಮಯ್ಯಗೆ ಗೇಟ್‌ ಪಾಸ್‌..! ಶಿವಕುಮಾರ್ ಸಿಎಂ ಪಟ್ಟ ಗ್ಯಾರಂಟಿ

ಪುರುಷರಿಗೂ ಗೃಹಲಕ್ಷ್ಮೀ ಮತ್ತು ಶಕ್ತಿ ಯೋಜನೆಯ ಲಾಭ..! ಇಲ್ಲಿದೆ ಹೊಸ ಅಪ್‌ಡೇಟ್

Leave a Comment