ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕ ಸರ್ಕಾರವು ಮನಸ್ವಿನಿ ಯೋಜನೆಯನ್ನು ಘೋಷಣೆ ಮಾಡಿದೆ, ಇದು ಗೃಹ ಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ ಮತ್ತು ಅನ್ನ ಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿದ ನಂತರ ಈ ಯೋಜನೆಯನ್ನು ಮಹಿಳೆಯರಿಗಾಗಿ ಜಾರಿ ಮಾಡಲಾಗಿದೆ. ಈ ಯೋಜನೆಯ ಲಾಭ ಏನು? ಇದರ ಪ್ರಯೋಜನ ಹೇಗೆ ಪಡೆಯುವುದು ಎಂದು ನಾವು ನಿಮಗೆ ಈ ಲೇಖನದಲ್ಲಿ ಮಾಹಿತಿ ನೀಡುತ್ತೇವೆ, ಮಿಸ್ ಮಾಡದೆ ಕೊನೆಯವರೆಗೂ ಓದಿ.
ಕರ್ನಾಟಕ ಸರ್ಕಾರ ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಈಗಾಗಲೇ ಗೃಹ ಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ, ಅನ್ನ ಭಾಗ್ಯ ಮತ್ತು ಸ್ತ್ರೀಶಕ್ತಿ ಸಾಲ ಯೋಜನೆಯನ್ನು ಘೋಷಿಸಲಾಗಿದೆ. ಇದೀಗ ಸ್ತ್ರೀಶಕ್ತಿ ಸಂಸ್ಥೆಗಳಿಂದ ಸಾಲ ಪಡೆದ ಹಿನ್ನೆಲೆಯಲ್ಲಿ ಮನಸ್ವಿನಿ ಯೋಜನೆ ಜಾರಿಗೊಳಿಸಲಾಗಿದ್ದು , ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಅನುಕೂಲವಾಗಲಿದೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯ ಸರಕಾರ ಕಳೆದ ಬಜೆಟ್ ನಲ್ಲಿ ಹಣ ಮೀಸಲಿಟ್ಟಿತ್ತು.
ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಗೃಹ ಲಕ್ಷ್ಮಿ ಯೋಜನೆ ಜಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳನ್ನು ಈಗಾಗಲೇ ಮಹಿಳೆಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಈ ನಡುವೆ ಸ್ತ್ರೀಶಕ್ತಿ ಗುಂಪುಗಳ ಮಹಿಳೆಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ 2 ಲಕ್ಷ ಸಾಲ ನೀಡುವುದಾಗಿ ಘೋಷಣೆ ಮಾಡಿದೆ. ಇಷ್ಟು ವರ್ಷ ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿತ್ತು.
ಆದರೆ ಇನ್ಮುಂದೆ ಬಡ್ಡಿ ಇಲ್ಲದೆ ಸಾಲ ನೀಡಲಾಗುತ್ತಿದ್ದು, ಮಹಿಳೆಯರು ಕಂತುಗಳ ಆಧಾರದಲ್ಲಿ ಅಸಲು ಮಾತ್ರ ಪಾವತಿಸಬಹುದಾಗಿದೆ. ಇದೀಗ ರಾಜ್ಯ ಸರ್ಕಾರ ದಸರಾ ಸಂದರ್ಭದಲ್ಲಿ ಮಹಿಳೆಯರಿಗಾಗಿ ಮತ್ತೊಂದು ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯು 40 ರಿಂದ 64 ವರ್ಷ ವಯಸ್ಸಿನ ವಿಚ್ಛೇದಿತ ಮತ್ತು ಅವಿವಾಹಿತ ಮಹಿಳೆಯರಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.
ಮುಖ್ಯವಾಗಿ 2013ರಲ್ಲಿ ರಾಜ್ಯ ಸರಕಾರ ಮನಸ್ವಿನಿ ಯೋಜನೆ ಜಾರಿಗೊಳಿಸಿದ್ದು, ಈ ಯೋಜನೆಯ ಮೂಲಕ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಯೋಜನೆ ರೂಪಿಸಲಾಗಿದೆ. ಈ ಯೋಜನೆಯ ಮೂಲಕ ಪ್ರತಿ ತಿಂಗಳು ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು. ಮನಸ್ವಿನಿ ಯೋಜನೆ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು.
ಈ ಯೋಜನೆಗೆ ರಾಜ್ಯ ಸರಕಾರ ಈ ವರ್ಷದ ಬಜೆಟ್‌ನಲ್ಲಿ 138 ಕೋಟಿ ರೂ. ಮಹಿಳೆಯರ ಅಭಿವೃದ್ಧಿಗೆ ರಾಜ್ಯ ಸರಕಾರ ಹಗಲಿರುಳು ಶ್ರಮಿಸುತ್ತಿದೆ ಎಂದರು. ರಾಜ್ಯ ಸರ್ಕಾರ ಈಗಾಗಲೇ ಶಕ್ತಿ ಯೋಜನೆ ಮೂಲಕ ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಘೋಷಿಸಿದ್ದು, ಕಳೆದ ಕೆಲವು ತಿಂಗಳಿನಿಂದ ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಶಕ್ತಿ ಯೋಜನೆಯಿಂದಾಗಿ ಸರ್ಕಾರಿ ಬಸ್‌ಗಳು ಈಗ ಜನರಿಂದ ತುಂಬಿ ತುಳುಕುತ್ತಿವೆ.
ಇತರೆ ವಿಷಯಗಳು:
ಮುಂದಿನ 3 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆ ಹೈಅಲರ್ಟ್ ನೀಡಿದ IMD
ಇನ್ಮುಂದೆ ಮಕ್ಕಳಿಗೂ ಪ್ಯಾನ್ ಕಾರ್ಡ್ ಕಡ್ಡಾಯ: ಸರ್ಕಾರದ ಹೊಸ ಆದೇಶ