rtgh

ಇನ್ಮುಂದೆ ರೈತರಿಗೆ ಪ್ರತಿ ತಿಂಗಳು 3 ಸಾವಿರ ಹಣ ಜಮೆ!! ಕೇಂದ್ರದಿಂದ ಹೊಸ ಪಿಂಚಣಿ ಯೋಜನೆ ಆರಂಭ

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಕೇಂದ್ರ ಮತ್ತು ರಾಜ್ಯ ಸರ್ಕಾರವು ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಪ್ರತಿಯೊಬ್ಬ ರೈತರೂ ಕೂಡ ಎಲ್ಲಾ ಯೋಜನೆಗಳ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ರೈತರಿಗೆ ಸರ್ಕಾರವು ಇದೀಗ ಪ್ರತಿ ತಿಂಗಳು ಪಿಂಚಣಿ ಸೌಲಭ್ಯವನ್ನು ಸರ್ಕಾರ ಒದಗಿಸಲು ನಿರ್ಧಾರ ಮಾಡಿದೆ. ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

3000 as pension for farmers every month

ಕೇಂದ್ರ ಸರ್ಕಾರ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ರೈತರ ಆರ್ಥಿಕ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಮಂದನ್ ಯೋಜನೆಯನ್ನು ಪ್ರಾರಂಭಿಸಿದ್ದು, ಈ ಯೋಜನೆಯಡಿ ರೈತರಿಗೆ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಸಿಗಲಿದೆ.

ನಿಮ್ಮ ವಯಸ್ಸು 18 ರಿಂದ 40 ವರ್ಷ ಆಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗುತ್ತಾರೆ. ಈ ಯೋಜನೆಗೆ ಅರ್ಜಿ ಸಲ್ಲಿಸುವ ರೈತರು ಎರಡು ಹೆಕ್ಟೇರ್ ಭೂಮಿ ಹೊಂದಿರಬೇಕು. ಈ ಯೋಜನೆಗೆ ಮನೆಯಲ್ಲಿ ಕುಳಿತು ಆನ್ಲೈನ್ ನಲ್ಲಿ ಕೂಡ ಅರ್ಜಿ ಸಲ್ಲಿಸಬಹುದು. ಮೊದಲು maandhan.in ವೆಬ್ಸೈಟ್ ಹೋಗಿ ಸ್ವಯಂ ನೋಂದಣಿ ಮಾಡಬೇಕು. ಇದಾದ ಬಳಿಕ ಮೊಬೈಲ್ ಸಂಖ್ಯೆಗೆ OTP ಬರಲಿದ್ದು, ಇದಾದ ಬಳಿಕ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬೇಕು.

ಇದನ್ನೂ ಸಹ ಓದಿ: ರಾಜ್ಯದ ಎರಡು ಗ್ಯಾರಂಟಿ ಯೋಜನೆಗಳು ಕ್ಯಾನ್ಸಲ್!!‌ ತಕ್ಷಣ ಈ ಕೆಲಸ ಮಾಡಿ


ನಿಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸಲು ರೈತರು ಕುಟುಂಬದ ವಾರ್ಷಿಕ ಆದಾಯ, ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ನೀಡಬೇಕಾಗುತ್ತದೆ. ಈ ಎಲ್ಲಾ ದಾಖಲೆಗಳ ಜೊತೆಗೆ ನಿಮ್ಮ ಬ್ಯಾಂಕ್ ಖಾತೆಯ ಮಾಹಿತಿ ನೀಡಬೇಕು. ಅರ್ಜಿ ಭರ್ತಿ ಮಾಡುವ ಸಂದರ್ಭ ಕಡ್ಡಾಯವಾಗಿ ಆಧಾರ್ ಸಂಖ್ಯೆ ನಮೂದಿಸಿದ ನಂತರ ನಿಮಗೆ ಪಿಂಚಣಿ ಖಾತೆಯ ನಂಬರ್ ನೀಡಲಾಗುತ್ತದೆ.

ಈ ಯೋಜನೆಗೆ ಅರ್ಜಿ ಸಲ್ಲಿಸುವಾಗ ನಿಮ್ಮ ವಯಸ್ಸು 18 ಆಗಿದ್ದಲ್ಲಿ 55ರೂಪಾಯಿ ಠೇವಣಿ ಇಡಬೇಕು. ಒಂದು ವೇಳೆ, 30 ವರ್ಷದವರಾಗಿದ್ದರೆ 110 ರೂ ಮತ್ತು 40 ಆಗಿದ್ದಲ್ಲಿ 200 ರೂಪಾಯಿ ಠೇವಣಿ ಇರಿಸಬೇಕಾಗುತ್ತದೆ. 60 ವರ್ಷದ ನಂತರ ರೈತರು ಪಿಂಚಣಿ ಪಡೆಯಲು ಅರ್ಹರಾಗುತ್ತಾರೆ. ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ರೈತರು ವೃದ್ಯಾಪದಲ್ಲಿ ಆರ್ಥಿಕ ಲಾಭ ಪಡೆಯಲು ಸಾಧ್ಯವಾಗುತ್ತದೆ. ಈ ಯೋಜನೆಯಡಿ ಮಾಸಿಕ ಮೂರು ಸಾವಿರ ರೂಪಾಯಿ ಒದಗಿಸಲಾಗಿ, ವಾರ್ಷಿಕವಾಗಿ ಇದು 36 ಸಾವಿರ ರೂಪಾಯಿ ಸಿಗಲಿದೆ.

ಇತರೆ ವಿಷಯಗಳು:

ಅನ್ನದಾತರಿಗೆ ಸಿಹಿ ಸುದ್ದಿ: ಅತಿ ಕಡಿಮೆ ಬಡ್ಡಿದರದಲ್ಲಿ ಹೆಚ್ಚಿನ ಸಾಲ ಸೌಲಭ್ಯ!! ಇಂದೇ ಅಪ್ಲೇ ಮಾಡಿ ಅರ್ಜಿ ಪ್ರಕ್ರಿಯೆ ಪ್ರಾರಂಭ

PMKVY 4.0: ದೇಶದ ಪ್ರತಿ ಜಿಲ್ಲೆಯಲ್ಲೂ ಕೌಶಲ್ಯ ಅಭಿವೃದ್ಧಿ ಯೋಜನೆಯ ಹೊಸ ಮಾರ್ಗಸೂಚಿ ಬಿಡುಗಡೆ!!

Leave a Comment