rtgh

ಗೃಹಲಕ್ಷ್ಮಿ ಆಯ್ತು ಈಗ ಮಹಾಲಕ್ಷ್ಮಿ: 10 ಗ್ರಾಂ ಚಿನ್ನ, ಮದುವೆಗೆ 1 ಲಕ್ಷ ರೂ. ಉಚಿತ!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕ ಸರ್ಕಾರವು ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಮುಖ್ಯಸ್ಥರಿಗೆ ತಿಂಗಳಿಗೆ 2000 ರೂಪಾಯಿಗಳನ್ನು ನೀಡುತ್ತಿದೆ. ಐದು ರಾಜ್ಯಗಳ ಚುನಾವಣೆಗೂ ಮುನ್ನ ಕಾಂಗ್ರೆಸ್ ಮಹಾಲಕ್ಷ್ಮಿ ಯೋಜನೆಯನ್ನು ಘೋಷಿಸಿದೆ.

New Scheme Karnataka

ಗೃಹ ಲಕ್ಷ್ಮಿ ಯೋಜನೆ ಕರ್ನಾಟಕದ ಮಹಿಳೆಯರಿಗೆ ವರದಾನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೆ ತಂದ ಗೃಹ ಲಕ್ಷ್ಮೀ ಯೋಜನೆ ಮೂಲಕ ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ.ಗಳನ್ನು ನೀಡಲಾಗುತ್ತಿದೆ . ಇದೀಗ ಪಂಚರಾಜ್ಯ ಚುನಾವಣೆಗೂ ಮುನ್ನ ಕಾಂಗ್ರೆಸ್ ಮಹಾಲಕ್ಷ್ಮಿ ಯೋಜನೆಯನ್ನು ಘೋಷಿಸಿದೆ.

ಹಿಂದುಳಿದ ವರ್ಗಗಳ ಯುವತಿಯರಿಗೆ ಸಹಾಯ ಮಾಡಲು ಮಹಾಲಕ್ಷ್ಮಿ ಯೋಜನೆ ಘೋಷಿಸಲಾಗಿದೆ. ಈ ಯೋಜನೆಯ ಮೂಲಕ ಯುವತಿಯರಿಗೆ ಮದುವೆ ಸಂದರ್ಭದಲ್ಲಿ 1 ಲಕ್ಷ ರೂ.ಗಳ ಜೊತೆಗೆ 10 ಗ್ರಾಂ ಚಿನ್ನವನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಪ್ರಸ್ತುತ ಈ ಯೋಜನೆಯನ್ನು ಕಾರ್ಯಗತಗೊಳಿಸಲು 250 ಕೋಟಿ ರೂಪಾಯಿ ಹೂಡಿಕೆ ಅಗತ್ಯವಿದೆ.

ಅಂದಹಾಗೆ ಈ ಯೋಜನೆ ಜಾರಿಯಾಗುತ್ತಿರುವುದು ಕರ್ನಾಟಕದಲ್ಲಿ ಅಲ್ಲ ತೆಲಂಗಾಣದಲ್ಲಿ. ಇದಲ್ಲದೆ, ತೆಲಂಗಾಣ ಕಾಂಗ್ರೆಸ್ ಘೋಷಿಸಿದ ಯೋಜನೆ ಬಗ್ಗೆ ವಿವಾದವಿದೆ . ಇದರ ಹೊರತಾಗಿ ತೆಲಂಗಾಣ ಕಾಂಗ್ರೆಸ್ ಸರ್ಕಾರವು 2023 ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಮಹಿಳೆಯರಿಗಾಗಿ ಮಹಾಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಈಗಾಗಲೇ ಘೋಷಿಸಿದೆ.


ಕರ್ನಾಟಕದಲ್ಲಿ ಕಾಂಗ್ರೆಸ್ ಘೋಷಿಸಿದಂತೆ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವು ಈಗಾಗಲೇ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಮಾಸಿಕ 25 ಸಾವಿರ ರೂ., ಹಣದ ಜತೆಗೆ 500 ರೂ.ಗೆ ಗ್ಯಾಸ್ ಸಿಲಿಂಡರ್ ಹಾಗೂ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ನೀಡುವುದಾಗಿ ಘೋಷಿಸಲಾಗಿತ್ತು. ಕರ್ನಾಟಕದಲ್ಲಿ ಖಾತ್ರಿ ಯೋಜನೆಗಳಿಂದ ಕಾಂಗ್ರೆಸ್ ಪಕ್ಷ ಗೆದ್ದಿದೆ.

ಇದನ್ನೂ ಸಹ ಓದಿ: ರೈತರಿಗೆ 5 ಗಂಟೆ ನಿರಂತರ ವಿದ್ಯುತ್ ಪೂರೈಕೆ: ಇಂಧನ ಸಚಿವ ಕೆ.ಜೆ.ಜಾರ್ಜ್

ಗೃಹ ಲಕ್ಷ್ಮಿ ಯೋಜನೆಯ ಮೂಲಕ, ಕರ್ನಾಟಕದ ಪ್ರತಿಯೊಬ್ಬ ಮನೆಯವರಿಗೆ ಪ್ರತಿ ತಿಂಗಳು ಅವರ ಬ್ಯಾಂಕ್ ಖಾತೆಗೆ ಹಣವನ್ನು ನೇರವಾಗಿ ವರ್ಗಾಯಿಸಲಾಗುತ್ತದೆ. ಗೃಹ ಜ್ಯೋತಿ ಯೋಜನೆ ಮೂಲಕ ಪ್ರತಿ ತಿಂಗಳು 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ನೀಡಲಾಗುತ್ತಿದೆ. ಎಪಿಎಲ್, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವವರು ಈ ಯೋಜನೆಯ ಲಾಭವನ್ನು ಪಡೆಯುತ್ತಾರೆ. ರಾಜ್ಯದಲ್ಲಿ ಮಹಿಳೆಯರಿಗಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ.

ಈ ಯೋಜನೆಯ ಮೂಲಕ ರಾಜ್ಯದ ಮಹಿಳೆಯರು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಈ ಯೋಜನೆ ಜಾರಿಯಾಗಿದೆ. ಈ ಯೋಜನೆಯ ಮೂಲಕ ರಾಜ್ಯಾದ್ಯಂತ ನಿತ್ಯ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಐದು ಖಾತರಿ ಯೋಜನೆಗಳ ಭರವಸೆಯ ಮೇಲೆ. ಇದೀಗ ಐದು ರಾಜ್ಯಗಳ ಚುನಾವಣೆ ಗೆಲ್ಲಲು ಕಾಂಗ್ರೆಸ್ ಪ್ಲಾನ್ ರೂಪಿಸಿದೆ. ಕರ್ನಾಟಕದಲ್ಲಿ ಪಂಚರಾಜ್ಯಗಳ ಚುನಾವಣೆಗೂ ಮುನ್ನವೇ ಯುವ ನಿಧಿ ಯೋಜನೆಯನ್ನು ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.

ಸದ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಯೋಜನೆಯನ್ನು ತೆಲಂಗಾಣ ಕಾಂಗ್ರೆಸ್ ಪಕ್ಷ ಜಾರಿಗೆ ತಂದಂತೆ ಕಾಣುತ್ತಿದೆ. ಅಲ್ಲದೆ ತಿಂಗಳಿಗೆ 25000 ರೂಪಾಯಿ ಜೊತೆಗೆ ಉಚಿತ ಬಸ್, ಮದುವೆಗೆ ಚಿನ್ನ ಮತ್ತು ನಗದು ನೀಡುವುದಾಗಿ ಘೋಷಿಸಿದೆ. ಕರ್ನಾಟಕದಲ್ಲಿ ಜಾರಿಗೊಂಡಿರುವ ಖಾತರಿ ಯೋಜನೆ ತೆಲಂಗಾಣದಲ್ಲೂ ಆಗುತ್ತಿರುವುದು ಕುತೂಹಲ ಮೂಡಿಸಿದೆ.

ಇತರೆ ವಿಷಯಗಳು:

ಮುಂದಿನ 3 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆ ಹೈಅಲರ್ಟ್‌ ನೀಡಿದ IMD

ಇನ್ಮುಂದೆ ಮಕ್ಕಳಿಗೂ ಪ್ಯಾನ್ ಕಾರ್ಡ್ ಕಡ್ಡಾಯ: ಸರ್ಕಾರದ ಹೊಸ ಆದೇಶ

Leave a Comment