ನಮಸ್ತೆ ಕರುನಾಡು, ರಾಜ್ಯದಲ್ಲಿ ಕರ್ನಾಟಕ ಸರ್ಕಾರ ಆಧಿಕಾರಕ್ಕೆ ಬರುವ ಮೂಲಕ ಪ್ರತಿಯೊಬ್ಬ ವ್ಯಕ್ತಿಗೂ 10 ಕೆಜಿ ಅಕ್ಕಿ ನೀಡುವುದಾಗಿ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿತ್ತು ಆದರೆ ಕಾರಣಾಂತರಗಳಿಂದ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿ ಅಕ್ಕಿಯ ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ಹಾಕುವುದಾಗಿ ತಿಳಿಸಿತ್ತು ಆದರೆ ಇದೀಗ ರಾಜ್ಯದ ಜನರು ನಮಗೆ ಹಣ ಬೇಡ ಅಕ್ಕಿನೇ ಬೇಕು ಎಂದು ತಮ್ಮ ನಿರ್ಧಾರವನ್ನು ವ್ಯಕ್ತಪಡಿಸುತ್ತಿದ್ದಾರೆ ಇದಕ್ಕೆ ಕಾರಣ ಏನು ಎನ್ನುವುದನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ.
ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಯೋಜನೆಗೆ ಒತ್ತಾಯಿಸಿ ನ್ಯಾಯಬೆಲೆ ಅಂಗಡಿ ರಾಜ್ಯಾದ್ಯಂತ ರೇಷನ್ ಎತ್ತುವಳಿ ಸ್ಥಗಿತಗೊಳಿಸಲಾಗಿದೆ.
ಇದಕ್ಕಾಗಿ ಪಡಿತರ ಚೀಟಿದಾರರಿಗೆ ಈ ತಿಂಗಳಿನಲ್ಲಿ ಪಡಿತರ ಪಡೆಯಲು ವಿಳಂಬವಾಗುವ ಸಾಧ್ಯತೆ ಇದೆ. ನವೆಂಬರ್ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನ್ಯಾಯಬೆಲೆ ಅಂಗಡಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ನ್ಯಾಯಬೆಲೆ ಅಂಗಡಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಆಹಾರ ಇಲಾಖೆ ಅಧಿಕಾರಿಗಳು, ಅಧಿಕಾರಿಗಳೊಂದಿಗೆ ಮೂರ್ನಾಲ್ಕು ಬಾರಿ ಸಭೆ ನಡೆಸಿದರೂ ಪರಿಹಾರವಿಲ್ಲ. ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಒತ್ತಾಯಿಸಿದ್ದಾರೆ. ಪಡಿತರ ಚೀಟಿದಾರರಿಗೆ ಅಕ್ಕಿ ಬದಲು ಹಣ ನೀಡುವುದರಿಂದ ನ್ಯಾಯಬೆಲೆ ಅಂಗಡಿಗೆ ಕಮಿಷನ್ ಸಿಗುತ್ತಿಲ್ಲ. ಹೀಗಾಗಿ 10 ಕೆಜಿ ಅಕ್ಕಿಯನ್ನೇ ಎಲ್ಲರಿಗೂ ವಿತರಿಸಲು ಕ್ರಮ ಕೈಗೊಳ್ಳಬೇಕು.
ಇತರೆ ವಿಷಯಗಳು:
ನವೆಂಬರ್ನಲ್ಲಿ ಶಾಲಾ ಮಕ್ಕಳಿಗೆ ಸಾಲು ಸಾಲು ರಜೆ!! ದೀಪಾವಳಿ ಹಬ್ಬದ ಭರ್ಜರಿ ಘೋಷಣೆ
ಗೃಹಜ್ಯೋತಿ ನಿಯಮದಲ್ಲಿ ದಿಢೀರ್ ಬದಲಾವಣೆ: ಉಚಿತ ವಿದ್ಯುತ್ ಪ್ರಮಾಣದಲ್ಲಿ ಇಳಿಕೆ.!