rtgh

ದ್ವಿತೀಯ ಪಿಯುಸಿ ಪ್ರಿಪ್ರೇಟರಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಎಲ್ಲಾ ವಿದ್ಯಾರ್ಥಿಗಳು ಪರಿಶೀಲಿಸಿ

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ದ್ವಿತೀಯ ಪಿಯುಸಿ ಪ್ರಿಪೆರೇಟರಿ ಮತ್ತು ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಎಲ್ಲಾ ವಿದ್ಯಾರ್ಥಿಗಳುಈ ವೇಳಾಪಟ್ಟಿಯನ್ನು ಗಮನಿಸಬೇಕಾಗಿದೆ. ಹಾಗೆಯೇ ಪರೀಕ್ಷೆಗೆ ತಯಾರಾಗಬೇಕು. ಈ ವೇಳಾಪಟ್ಟಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ. ಸಂಪೂರ್ಣವಾಗಿ ವಿದ್ಯಾರ್ಥಿಗಳು ಕೊನೆಯವರೆಗೂ ಓದಿ.

Second PUC Preparatory Exam Schedule Released

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟ ಮಾಡಿದ್ದು, 2024ರ ಫೆ.13ರ ವರೆಗೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಸಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪೂರ್ವಭಾವಿಯಾಗಿ ಜಿಲ್ಲಾಹಂತದಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ಜ.16 ರಿಂದ 30 ರ ನಡುವೆ ಜಿಲ್ಲಾಮಟ್ಟದಲ್ಲಿ ನಡೆಸಲು ಸೂಚಿಸಲಾಗಿದೆ. ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ (ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆಗಳು ನಡೆಯಲಿದೆ. 80 ಅಂಕಗಳ ಪರೀಕ್ಷೆ ನಡೆಯಲಿದ್ದು, 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನವಿರಲಿದೆ.

ಇದನ್ನೂ ಸಹ ಓದಿ: ಹಿರಿಯ ನಾಗರಿಕರಿಗೆ ಗುಡ್‌ ನ್ಯೂಸ್!‌ ಕೇಂದ್ರ ಸರ್ಕಾರದ ಹೊಸ ಯೋಜನೆಯಲ್ಲಿ ಸಂಪೂರ್ಣ ಲಾಭ


ಸೆಕೆಂಡ್ ಪಿಯು ಪ್ರಿಪರೇಟರಿ ಪರೀಕ್ಷೆ ಸೂಚನೆಗಳು:

  • ಆಯಾ ಜಿಲ್ಲೆಗಳ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, (ಪದವಿ ಪೂರ್ವ) ರವರು ಜಿಲ್ಲಾ ಮಟ್ಟದಲ್ಲಿ ವೇಳಾ ಪಟ್ಟಿ ಸಿದ್ಧಪಡಿಸಿ ಪ್ರಿಪರೇಟರಿ ಪರೀಕ್ಷೆ ನಡೆಸುವುದು.
  • ಮಂಡಳಿಯ ನಿರ್ದೇಶನದಂತೆ ಪ್ರಾಯೋಗಿಕ ಪರೀಕ್ಷೆ ಹೊಂದಿರುವ ವಿಷಯಗಳಲ್ಲಿ 70 ಅಂಕಗಳು ಹಾಗೂ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 80 ಅಂಕಗಳಿಗೆ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸುವುದು.
  • ಈಗಾಗಲೇ ಮಂಡಳಿಯ ಜಾಲತಾಣದಲ್ಲಿ ಅಪ್ ಲೋಡ್ ಮಾಡಿರುವ ಮಾದರಿ ಪ್ರಶ್ನೆಪತ್ರಿಕೆಗಳು ಹಾಗೂ ನೀಲನಕ್ಷೆಗಳ ಆಧಾರದ ಮೇಲೆ ವಿಭಾಗ ಮಟ್ಟದಲ್ಲಿ ಪ್ರಶ್ನೆಪತ್ರಿಕಾ ತಯಾರಿಕಾ ತರಬೇತಿ ಹೊಂದಿದ ಉಪನ್ಯಾಸಕರನ್ನು ಬಳಸಿಕೊಂಡು ಸಿದ್ಧಪಡಿಸುವುದು.
  • ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪದವಿ ಪೂರ್ವ ಕಾಲೇಜುಗಳಿಗೆ ಅಗತ್ಯಕ್ಕನುಗುಣವಾಗಿ ಪಶ್ನೆಪತ್ರಿಕೆಗಳನ್ನು ವಿತರಿಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ದಿನಾಂಕ:16-01-2024, 30-01-2024 ರವರೆಗೆ ನಡೆಸುವುದು.
  • ಯಾವುದೇ ಲೋಪಗಳಿಗೆ ಅವಕಾಶ ನೀಡದಂತೆ ಪರೀಕ್ಷಾ ಗೌಪ್ಯತೆಯೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮ ವಹಿಸುವುದು.

ಅಂತಿಮ ಪರೀಕ್ಷೆಯ ಪ್ರಮುಖ ದಿನಾಂಕ:

ಇತರೆ ವಿಷಯಗಳು:

ಇನ್ನೆರಡು ದಿನಗಳಲ್ಲಿ ರೈತರಿಗೆ ಬರ ಪರಿಹಾರ ರಿಲೀಸ್! ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

ಕನಸಿನ ಮನೆ ಕಟ್ಟುವವರಿಗೆ ಕೇಂದ್ರದಿಂದ ಬಂಪರ್‌ ಗಿಫ್ಟ್!!‌ ಡಿಸೆಂಬರ್‌ 31 ರೊಳಗೆ ನೋಂದಾಯಿಸಿ

Leave a Comment