ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಲಾಗಿದೆ. ಈಗ ಖಾಸಗಿ ಬಸ್ ಗಳಲ್ಲಿಯೂ ಈ ಯೋಜನೆಯನ್ನು ವಿಸ್ತರಿಸಲು ಹೈಕೋರ್ಟ್ ನಿರ್ದೇಶಿಸಿದೆ. ಇದರ ಬಗೆಗಿನ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.
ಈ ‘ಶಕ್ತಿ ಯೋಜನೆ’ಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ಕೋರಿ ಉಡುಪಿ ಜಿಲ್ಲೆ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್‌ಕುಮಾರ್ ಶೆಟ್ಟಿ ಅವರು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಎರಡು ತಿಂಗಳಲ್ಲಿ ಪರಿಗಣಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದರು.
ಇದನ್ನೂ ಸಹ ಓದಿ: ಉದ್ಯೋಗಿಗಳ ಸಂಬಳ ಹೆಚ್ಚಳಕ್ಕೆ ಈ ಕೆಲಸ ಕಡ್ಡಾಯ! ಹಣಕಾಸು ಸಚಿವರಿಂದ ಮಹತ್ವದ ಘೋಷಣೆ
ಖಾಸಗಿ ಬಸ್‌ಗಳ ಸಂಚಾರಕ್ಕೆ 65 ವರ್ಷಗಳ ಇತಿಹಾಸವಿದೆ. ರಾಜ್ಯದ 16 ಜಿಲ್ಲೆಗಳಲ್ಲಿ 9 ಸಾವಿರಕ್ಕೂ ಹೆಚ್ಚು ಖಾಸಗಿ ಬಸ್‌ಗಳು ತಮ್ಮ ಸೇವೆ ಒದಗಿಸುತ್ತಿವೆ. ರಾಜ್ಯದಲ್ಲಿ 75 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಖಾಸಗಿ ಬಸ್‌ಗಳ ಮೇಲೆ ಅವಲಂಬಿತರಾಗಿದ್ದಾರೆ. ಇದಲ್ಲದೇ ಖಾಸಗಿ ಬಸ್ ಆಪರೇಟರ್‌ಗಳು ಹೆಚ್ಚಿನ ತೆರಿಗೆ ಪಾವತಿದಾರರಾಗಿದ್ದು, ಖಾಸಗಿ ಬಸ್ ಗಳಿಂದ ವಾರ್ಷಿಕ 1,620 ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ.
ಈ ಯೋಜನೆ ಜಾರಿಗೆ ಬಂದ ದಿನದಿಂದ ಖಾಸಗಿ ಬಸ್ ದಾರರಿಗೆ ಸಂಕಷ್ಟ ಪ್ರಾರಂಭವಾಗಿದೆ. ಇದರಿಂದಾಗಿ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ಅನ್ವಯಿಸಬೇಕು. ಸರ್ಕಾರಿ ಬಸ್‌ಗಳಂತೆ ಖಾಸಗಿ ಬಸ್‌ಗಳಲ್ಲಿಯೂ ಪ್ರಯಾಣಿಸುವ ಮಹಿಳೆಯರ ಪ್ರಯಾಣ ವೆಚ್ಚವನ್ನು ಸರ್ಕಾರವು ಖಾಸಗಿ ಬಸ್ ಆಪರೇಟರ್‌ಗಳಿಗೆ ಮರು ಪಾವತಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಾರಿಗೆ ಇಲಾಖೆಗೆ ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಆದೇಶ ನೀಡಬೇಕು ಎಂದು ಅರ್ಜಿದಾರರು ತಿಳಿಸಿದ್ದಾರೆ.
ಇತರೆ ವಿಷಯಗಳು
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಬಿಡುಗಡೆ: ಈ ರೀತಿಯಾಗಿ ಪಾವತಿ ಸ್ಥಿತಿ ಪರಿಶೀಲಿಸಿ
ಉಚಿತ ಸೌರ ಮೇಲ್ಛಾವಣಿ ಅರ್ಜಿ ಸಲ್ಲಿಕೆ ಆರಂಭ! ಕೂಡಲೇ ಮನೆ ಮನೆಗೆ ಬರಲಿದೆ ಉಚಿತ ವಿದ್ಯುತ್