ಹಲೋ ಸ್ನೇಹಿತರೇ ನಮ್ಮ ಈ ಲೇಖನಕ್ಕೆ ಸ್ವಾಗತ, ದಿಡೀರನೆ ವಾತಾವರಣ ಬದಲಾಗಿದೆ ಅಂದರೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಂಡಿದೆ ಇದರ ಇದರಿಂದ ಹವಮಾನ ಇಲಾಖೆ ಖಡಕ್ ಸೂಚನೆ ನೀಡಿದೆ ಇದರ ಬಗ್ಗೆ ಮುನ್ನೆಚ್ಚರಿಕಾ ಕ್ರಮವನ್ನು ಹೊರಡಿಸಿದೆ ಇದರ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಓದಿ.
ಹವಾಮಾನ ಇಲಾಖೆಯ ಪ್ರಕಟಣೆಯ ಪ್ರಕಾರ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇರುತ್ತದೆ ಎಂದು ಹೇಳಲಾಗಿದೆ. ಇದರ ಜೊತೆಗೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇರುತ್ತದೆ.
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ. ಕರಾವಳಿ ತೀರ ಭಾಗಗಳಲ್ಲಿ ಜಾಸ್ತಿಯೇ ಇರಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಗೆ ಕೊಡಗು, ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಉತ್ತಮ ಹಾಗೂ ಶಿವಮೊಗ್ಗ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇರುತ್ತದೆ.
ಮೈಸೂರು ಉತ್ತರ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು (ಗ್ರಾಮಾಂತರ ಸಹಿತ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇರುತ್ತದೆ. ಹಾಗೆ ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಇದನ್ನೂ ಸಹ ಓದಿ: ರೇಷನ್ ಕಾರ್ಡ್ ಇಲ್ಲದವರಿಗೆ ಭರ್ಜರಿ ಗುಡ್ ನ್ಯೂಸ್! ಹೊಸ ಪಡಿತರ ಚೀಟಿ ಪಡೆಯಲು ಇಲ್ಲಿಯವರೆಗು ಮಾತ್ರ ಅವಕಾಶ
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಯಾವ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ?
ಅರಬ್ಬಿ ಸಮುದ್ರದಲ್ಲಿನ ವಾಯು ಕುಸಿತದಿಂದ, ಅನಿಶ್ಚಿತ ದಿಕ್ಕಿನ ಚಲನೆಯ ಪರಿಣಾಮದಿಂದ ಜನವರಿ 9ರ ತನಕ ಈಗಿನ ಮಳೆಯ ವಾತಾವರಣವು ರಾಜ್ಯದಲ್ಲಿ ಮುಂದುವರಿಯುವ ಲಕ್ಷಣಗಳಿವೆ. ಹಾಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಕೆಲವು ಭಾಗಗಳಲ್ಲಿ ಭಾರಿ ಮಳೆ ಮುನ್ಸೂಚನೆಯೂ ಇದ್ದು, ಕೊಡಗು ಜಿಲ್ಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಸಾಧಾರಣ ಹಾಗೂ ಉತ್ತಮ ಮಳೆಯಾಗಲಿದ್ದು ಹಾಗೆಯೇ ಜಿಲ್ಲೆಯ ಕೆಲವು ಭಾಗಗಳಲ್ಲಿ ಹೆಚ್ಚು ಮಳೆ ಆಗುವ ಮುನ್ಸೂಚನೆ ಕಂಡುಬರುತ್ತಿದೆ.
ಇತರೆ ವಿಷಯಗಳು
- PUC ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟಿ ವಿತರಣೆ! ನೋಂದಣಿ ಪ್ರಕ್ರಿಯೆ ಶುರು
- ಸುಳ್ಳು ಮಾಹಿತಿ ನೀಡಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದರೆ ಅವರ ವಿರುದ್ಧ ಕೇಸ್ ಫಿಕ್ಸ್